ಬೆಳ್ಳಂಬೆಳಗ್ಗೆ ಮೆಸ್ಕಾಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
ಉಡುಪಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಮೆಸ್ಕಾಂ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸುವ ಮೂಲಕ ಕಾರ್ಕಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮೆಸ್ಕಾಂ ವಿಭಾಗದ ಅಕೌಂಟ್ ಆಫಿಸರ್ ಗಿರೀಶ್ ರಾವ್ ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ, ವಾಣಿಜ್ಯ ಸಂಕೀರ್ಣ ಸೇರಿದಂತೆ ಐದು ಕಡೆ ಲೋಕಾಯುಕ್ತ ಡಿವೈಎಸ್ ಪಿ ಮಂಜಿನಾಥ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.





