ನಿವೃತ್ತ ಪ್ರಾಂಶುಪಾಲ ಪ್ರೊ.ಚಿತ್ರಪಾಡಿ ಲಕ್ಷ್ಮೀನಾರಾಯಣ ಕಾರಂತರಿಗೆ ಸನ್ಮಾನ

ಉಡುಪಿ: ಇತ್ತೀಚೆಗೆ ನಿವೃತ್ತರಾದ ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಚಿತ್ರಪಾಡಿ ಲಕ್ಷ್ಮೀನಾರಾಯಣ ಕಾರಂತರನ್ನು ಸನ್ಮಾನಿಸಿ, ಶುಭ ವಿದಾಯ ಕೋರುವ ಸಮಾರಂಭವನ್ನು ಹಳೆ ವಿದ್ಯಾರ್ಥಿಗಳ ವತಿಯಿಂದ ಮಂಗಳವಾರ ಕಾಲೇಜಿನ ಎ.ವಿ.ಹಾಲ್‌ ನಲ್ಲಿ ನಡೆಸಲಾಯಿತು.
ಈ ವೇಳೆ ಪ್ರೊ.ಲಕ್ಷ್ಮಿನಾರಾಯಣ ಕಾರಂತರ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಅವರು ಪ್ರಾಂಶುಪಾಲರಾಗಿ ಕಾಲೇಜಿನ ಬೆಳವಣಿಗೆಯಲ್ಲಿ ನೀಡಿದ ಅನುಪಮ ಸೇವೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಎಲ್.ಸಾಮಗ, ಕಾಲೇಜಿನ ಉಪ ಪ್ರಾಂಶುಪಾಲ ಡಾ.ಎಂ.ವಿಶ್ವನಾಥ ಪೈ, ನೂತನ ನಿಯೇೂಜಿತ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಪದವಿಪೂರ್ವ ಪ್ರಾಂಶುಪಾಲೆ ಮಾಲತಿದೇವಿ ಮಾತನಾಡಿದರು.
ಸಭಾಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ವಹಿಸಿ ಮಾತನಾಡಿ, ಕಾರಂತರ ಜೊತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು. ಪ್ರೊ.ಕಾರಂತರ ವ್ಯಕ್ತಿತ್ವದ ವಿಶೇಷತೆ ಕುರಿತಾಗಿ ಮಾತನಾಡಿದರು. ವೇದಿಕೆಯಲ್ಲಿ ಸಂಘದ ಕೇೂಶಾಧಿಕಾರಿ ದೀಪಾಲಿ ಕಾಮತ್, ಪದಾಧಿಕಾರಿಗಳಾದ ಪ್ರೀತೇಶ ಬಿ.ಡಿಸಾ, ಶ್ಯಾಮಲಾ ಉಪಸ್ಥಿತರಿದ್ದರು. ರಾಜ್ಯ ಶಾಸ್ತ್ರ ಉಪನ್ಯಾಸಕಿ ಅದಿತಿ ಸ್ವಾಗತಿಸಿದರು, ಉಪನ್ಯಾಸಕ ಸನತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!