ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಮೂವರ ಬಂಧನ

ಬಜ್ಪೆ: ದ್ವಿಚಕ್ರ ವಾಹನದಲ್ಲಿ ಮಾರಕಾಸ್ರ್ತ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಬಜ್ಪೆಯ ಪೊರ್ಕೋಡಿ ಎಂಬಲ್ಲಿ ನಡೆದಿದೆ.
ಬಂಧಿತರನ್ನು ಪೊರ್ಕೋಡಿ ಗ್ರಾಮದ ಅಂಬೇಡ್ಕರ್‌ ಕಾಲನಿ ನಿವಾಸಿಗಳಾದ ಅಶ್ವತ್‌, ರವಿಶಂಕರ್‌ ಹಾಗೂ ಓರ್ವ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ. ಪೊಲೀಸರು ಬಂಧಿತರಿಂದ ಗರಗಸ ಮಾದರಿಯ ಮಾರಕಾಸ್ತ್ರ, ದ್ವಿಚಕ್ರವಾಹನವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಆರೋಪಿಗಳು ಪೊರ್ಕೋಡಿ ಗ್ರಾಮದಲ್ಲಿ ಮಾರಕಾಸ್ತ್ರವನ್ನು ಪ್ರದರ್ಶಿಸುತ್ತಾ ಭಯ ಪಡಿಸುವ ರೀತಿಯಲ್ಲಿ ಸುತ್ತಾಡುತ್ತಿದ್ದರು. ಇದರಿಂದ ಭಯಭಿತರಾದ ಗ್ರಾಮಸ್ಥರು ಬಜ್ಪೆ ಪೊಲೀಸರಿಗೆ ದೂರು ನೀಡದ್ದರು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇನ್ನು, ಈ ಬಗ್ಗೆ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!