ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ: ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತ್ಯು
ಶಿವಮೊಗ್ಗ: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆ ತಡರಾತ್ರಿ ಯುವಕರು ಬೈಕ್ ಜಾಥಾ ನಡೆಸುತ್ತಿದ್ದ ವೇಳೆ ಅಪಘಾತ ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಉಷಾ ನರ್ಸಿಂಗ್ ಹೋಮ್ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ನಡೆದಿದೆ.
ಮೃತ ಯುವಕನನ್ನು ವೇಂಕಟೇಶ ನಗರದ ನಿವಾಸಿ ಅಭಿ(21) ಎಂದು ಗುರುತಿಸಲಾಗಿದೆ.
ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್ ಜಾಥಾ ನಡೆಸಿದ್ದು, ಈ ವೇಳೆ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಯುವಕರು ಆತನ ನೆರವಿಗೆ ಧಾವಿಸಿದ್ದರು. ಆದರೆ, ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.





