ಟ್ರೇಡಿಂಗ್‌ನಲ್ಲಿ ಹಣ ಹೂಡಿ ಅಧಿಕ ಲಾಭದ ಆಮಿಷ: ಲಕ್ಷಾಂತರ ರೂ ವಂಚನೆ
ಉಡುಪಿ: ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ ಅಧಿಕ ಲಾಭ ಗಳಿಕೆ ಆಮಿಷವೊಡ್ಡಿ ಯುವತಿಯೊರ್ವರಿಗೆ 4.92 ಲಕ್ಷ ರೂ ವಂಚನೆ ಮಾಡಿರುವ ಘಟನೆ ಉಡುಪಿ ಸೆನ್ ಅಪರಾಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೀಪ್ತಿ (26)ಎನ್ನುವವರಿಗೆ ವಾಟ್ಸ್‌ಆಪ್, ಟೆಲಿಗ್ರಾಂ ಮೂಲಕ ಅಪರಿಚಿತರು ಟ್ರೇಡಿಂಗ್ ನಲ್ಲಿ ಹಣ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸುವ ಆಮಿಷವೊಡ್ಡಿದ್ದಾರೆ. ಇದನ್ನು ನಂಬಿದ ಯುವತಿ ಅಪರಿಚಿತರ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ಅಧಿಕ ಲಾಭ ಗಳಿಸುವ ಆಮಿಷವೊಡ್ಡಿದ್ದಾರೆ. ಇದನ್ನು ನಂಬಿದ ಯುವತಿ ಅಪರಿಚಿತರ ವಿವಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 4.92 ಲಕ್ಷ ರೂ.ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಈ ಬಗ್ಗೆ ಯುವತಿ ಉಡುಪಿಯ ಸೆನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದು, ಇದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.





