ಜ್ಞಾನಗಂಗಾ ಪದವಿ ಪೂರ್ವ ಕಾಲೇಜ್- ವಿಶ್ವ ಪರಿಸರ ದಿನಾಚರಣೆ

ಉಡುಪಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಮಣಿಪುರ ಇದರ ಸಹಭಾಗಿತ್ವದಲ್ಲಿ ಗಿಡ ನೆಡುವುದರ ಜೊತೆಗೆ ಪರಿಸರಕ್ಕೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮ ಜರುಗಿತು.

ಮಾತೃಸಂಸ್ಥೆ ಜಿ.ಐ.ಸಿ ಉಡುಪಿ ಕಾರ್ಯದರ್ಶಿ ಪ್ರಭಾಕರ್ ಕೆ.ಎಸ್ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಕಾರ್ಯಕ್ರಮವನ್ನು ರೋಟರಿಕ್ಲಬ್ ಮಣಿಪುರ ಇದರ ಕಾರ್ಯದರ್ಶಿಯಾದ ಗುರುರಾಜ್ ಭಟ್ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಪರಿಸರ ಸಂರಕ್ಷಣೆಯ ಕುರಿತು ಮಾತನಾಡಿದರು.

ರೋಟರಿಕ್ಲಬ್ ಮಣಿಪುರ ಇದರ ಸ್ಥಾಪಕ ಅಧ್ಯಕ್ಷರಾದ ಜೋಸೆಫ್ ಕುಂದರ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿ, ಮಣ್ಣಿನ ರಕ್ಷಣೆ, ಪರಿಸರ ರಕ್ಷಣೆ ಹಾಗೂ ಸ್ವಚ್ಛ ಪರಿಸರದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಲೀನಾ ಎಸ್ ನಾಯ್ಕ ಸ್ವಾಗತಿಸಿದರು. ರೋಟರಿಯನ್ ಕಾಮಿಲ್ ಸೀಕ್ವೆರಾ, ವಲಯ ಸೇನಾನಿ ಜೋನ್ ಸೀಕ್ವೆರಾ, ಚಂದ್ರಶೇಕರ್ ಮಣಿಪುರ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಿಡವನ್ನು ಬಹುಮಾನವಾಗಿ ನೀಡಿದರು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸ್ನೇಹಾ,ರೀಷಲ್, ಜೇನ್ ಅಲ್ವಾ, ಸೌಮ್ಯಾ ಕಾರ್ಯಕ್ರಮ ಸಂಯೋಜಿಸಿದರು. ಅಮೋಘ ಪ್ರಾರ್ಥನೆ ಹಾಡಿದರು.

Leave a Reply

Your email address will not be published. Required fields are marked *

error: Content is protected !!