ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ: ಸ್ಥಳದಲ್ಲೇ ಸಾವು..!
ಬ್ರಹ್ಮಾವರ: ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ಯಾವುದೋ ವಾಹನ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದ ಸಮೀಪ ಮಾಬುಕಳ ಮತ್ತು ಸಾಸ್ತಾನದ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ಯಾವುದೋ ವಾಹನ ಗುದ್ದಿ ನಿಲ್ಲಿಸದೇ ಪರಾರಿಯಾಗಿರುವ ಶಂಕೆ ಇದೆ.





