ಹಡಗಿನ ಅಗ್ನಿ ದುರಂತದಲ್ಲಿ ಗಾಯಗೊಂಡವರು ಚಿಕಿತ್ಸೆಗಾಗಿ ಮಂಗಳೂರಿಗೆ
ಮಂಗಳೂರು: ಸಿಂಗಾಪುರದ ಕಂಟೈನರ್ ಹಡಗು ಎಂ.ವಿ.ವಾನ್ ಹೈಯಲ್ಲಿ ಸ್ಫೋಟ ಉಂಟಾಗಿ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡ 18 ಮಂದಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಬೆಳಗ್ಗೆ 10:30ರ ಸುಮಾರಿಗೆ ಬೇಪೂರ್‌ನಿಂದ 70 ನಾಟಿಕಲ್ ಮೈಲು ದೂರದಲ್ಲಿ ಹಡಗು ಸಾಗುವ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ ಇಬ್ಬರು ತೈವಾನ್ ಹಾಗೂ ಒಬ್ಬರು ಮೈನ್ಮಾರ್ ಮತ್ತು ಇಂಡೋನೇಶ್ಯಾ ರಾಷ್ಟ್ರದ ಪ್ರಜೆಗಳಾಗಿದ್ದಾರೆ.
ಹಡಗು ಸ್ಫೋಟಗೊಂಡ ವೇಳೆ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತೀಯ ನೌಕಾಪಡೆಯ ಐಎನ್‌ಎಸ್ ಸೂರತ್ ಹಾಗೂ ಕೋಸ್ಟ್ ಗಾರ್ಡ್ ನ ಮೂರು ನೌಕೆಗಳು ಪಾಲ್ಗೊಂಡಿವೆ. ಜೊತೆಗೆ ಮಂಗಳೂರಿನ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ರಾಜ್ ದೂತ್ ಸೇರಿದಂತೆ ಹಲವು ನೌಕೆಗಳು ಪಾಲ್ಗೊಂಡಿದ್ದವು.





