ದ.ಕ ಜಿಲ್ಲೆಯಲ್ಲಿ ನಡೆದ ಮೂರು ಕೊಲೆ ಪ್ರಕರಣ ಎನ್‌ಐಎಗೆ ವಹಿಸಲಿ: ಮಂಜುನಾಥ್‌ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೊಲೆಗಳಿಂದ ಕರಾವಳಿ ಜನತೆ ಬೆಚ್ಚಿಬಿದ್ದಿದ್ದಾರೆ. ಕೇಂದ್ರ ಗೃಹ ಇಲಾಖೆಯು ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. ಇದೇ ಮಾದರಿಯಲ್ಲಿ ಅಶ್ರಫ್‌ ಹಾಗೂ ಇತ್ತೀಚೆಗೆ ನಡೆದ ಅಬ್ದುಲ್‌ ರೆಹಮಾನ್‌ ಕೊಲೆಯಾಗಿದೆ. ಕೇಂದ್ರ ಸರ್ಕಾರ ಈ ಮೂರು ಪ್ರಕರಣಗಳನ್ನು ಎನ್‌ಐಎಗೆ ವಹಿಸಲಿ ಎಂದು ವಿಧಾನ ಪರಿಷತ್‌ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್‌ ಭಂಡಾರಿ ಆಗ್ರಹಿಸಿದ್ದಾರೆ.
ಈ ಮೂರು ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಬಳಿಯುವ ಬದಲು ಮೂರು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದರೆ, ದುಷ್ಕೃತ್ಯದ ಹಿಂದಿನ ಸತ್ಯ ಹೊರಬರಲಿದೆ ಎಂದಿದ್ದಾರೆ.
ಬಜಪೆಯ ಕಿನ್ನಿಪದವಿನಲ್ಲಿ ಸುಹಾಸ್‌ ಶೆಟ್ಟಿ ಕೊಲೆ ನಡೆದ ಬಳಿಕ ಕೆಲವೇ ದಿನಗಳಲ್ಲಿ ಅಬ್ದುಲ್‌ ರೆಹಮಾನ್‌ ಕೊಲೆಯಾಗಿದೆ. ಏಪ್ರಿಲ್‌ 27ರಂದು ಅಶ್ರಫ್‌ ಎಂಬಾತನನ್ನು ಗುಂಪು ಹತ್ಯೆ ಮಾಡಲಾಗಿದೆ, ಈ ಮೂರು ಪ್ರಕರಣಗಳು ಪ್ರತಿಕಾರದ ಕೊಲೆಯಾಗಿರುವ ಸಾಧ್ಯತೆ ಹಿನ್ನೆಲೆ ಕೇಂದ್ರ ಸರ್ಕಾರ ಮೂರು ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿ, ಮಲತಾಯಿ ಧೋರಣೆ ತೋರದೇ, ಒಂದೇ ರೀತಿಯಲ್ಲಿ ಭೇದಿಸಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!