ನಾಯಿಗೆ ವಿಷ ಉಣಿಸಿದ ಆರೋಪಿಗಳ ಮಾಹಿತಿ ನೀಡಿದವರಿಗೆ 50ಸಾವಿರ ಬಹುಮಾನ

ಕಾರ್ಕಳ: ಅಜೆಕಾರು ಬಳಿ ನಾಯಿಗೆ ವಿಷ ಉಣಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಕೊಟ್ಟವರಿಗೆ ಪೆಟಾ ಸಂಸ್ಥೆ ಐವತ್ತು ಸಾವಿರ ರೂಪಾಯಿ ಘೋಷಣೆ ಮಾಡಿದೆ.
ಶುಕ್ರವಾರ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಮೃತಪಟ್ಟ ಸ್ಥಿತಿಯಲ್ಲಿದ್ದ ನಾಯಿಯನ್ನು ಮರಣೋತ್ತರ ಪರೀಕ್ಷೆ ನಡೆಸಿದಾಗ ನಾಯಿಗೆ ವಿಷ ಉಣಿಸಿರುವುದು ದೃಢಪಟ್ಟಿತ್ತು. ಈ ಬಗ್ಗೆ ತನಿಖೆ ಮುಂದುವರಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೋಪಲ್‌ ಫಾರ್‌ ಎಥಿಕಲ್‌ ಟ್ರೀಟ್‌ಮೆಂಟ್‌ ಆಫ್‌ ಎನಿಮಲ್ಸ್‌ ಸಂಸ್ಥೆಯು ನಾಯಿಗೆ ವಿಷ ಉಣಿಸಿದ ಆರೋಪಿಗಳ ಮಾಹಿತಿ ನೀಡಿದವರಿಗೆ 50 ಸಾವಿರ ರೂ ಬಹುಮಾನ ನೀಡುವುದಾಗಿ ಘೋಷಿಸಿದೆ. ಈ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!