ಉಡುಪಿ: ಜೂ.11 ರಂದು ಲಭ್ಯವಿರುವ ಕೋವಿಡ್ ಲಸಿಕೆಯ ಮಾಹಿತಿ
ಉಡುಪಿ ಜೂ.11(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ನಾಳೆ ಲಭ್ಯವಿರುವ ಕೋವಿಡ್ ಲಸಿಕೆಯ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಳೆ ಅಂದರೆ ಜೂ.12 ರಂದು ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಹಾಗೂ ಉಡುಪಿ ನಗರ ಪ್ರದೇಶದಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಭ್ಯ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಉಳಿದಂತೆ,ಕೋವಿಶೀಲ್ಡ್ ಪ್ರಥಮ ಡೋಸ್ ಪಡೆಯುವ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)230 ಡೋಸ್ ನೀಡಲಾಗುತ್ತದೆ. ಹಾಗೂ 250 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು, ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು.
ಕೋವಿಶೀಲ್ಡ್ ಪ್ರಥಮ ಡೋಸ್ ಪಡೆಯುವ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ) 80 ಡೋಸ್ ನೀಡಲಾಗುವುದು ಮತ್ತು 80 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು, ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು.
ಕೋವಿಶೀಲ್ಡ್ ಪ್ರಥಮ ಡೋಸ್ ಪಡೆಯುವ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ
ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ 70 ಡೋಸ್ ಲಸಿಕೆ ನೀಡಲಾಗುವುದು.
ಮತ್ತು 150 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು,
ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು.
ಕೋವ್ಯಾಕ್ಸಿನ್ 2ನೇ ಡೋಸ್ ಪಡೆಯುವ, ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2 ನೇ ಡೋಸ್ ನ್ನು ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ) 200 ಡೋಸ್ ಲಸಿಕೆ ನೀಡಲಾಗುವುದು.
ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ
ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) ಯಲ್ಲಿ 100 ಡೋಸ್ ಲಸಿಕೆ ನೀಡಲಾಗುವುದು.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ನಾಳೆ ಅಂದರೆ ಜೂ.12 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ತಿಳಿಸಿದ್ದಾರೆ.