ತಪ್ಪಿತಸ್ಥರು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಸುಹಾಸ್ ಶೆಟ್ಟಿ ಹಾಗೂ ಅಶ್ರಫ್ ಹತ್ಯೆ ಪ್ರಕರಣದ ಕುರಿತು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ತಪ್ಪು ಮಾಡಿದವರು ಯಾರೇ ಆದರೂ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.
ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾಡತನಾಡಿದ ಅವರು, ಸುಹಾಸ್ ಶೆಟ್ಟಿ ಪ್ರಕರಣದ ಮುಂದಿನ ತನಿಖೆಯನ್ನು ಎನ್‌ಐಎ ನಡೆಸಲಿದೆ. ಆಶ್ರಫ್ ಗುಂಪು ಹತ್ಯೆ ಪ್ರಕರಣದ ಆರೋಪಿಗಳು ಯಾರೂ ಕೂಡ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಸ್ತುತ ಇರುವ ಸಾಕ್ಷಿಗಳ ಆಧಾರದ ಮೇಲೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಲಾಗುವುದು. ದ್ವೇಷ ಭಾಷಣ ಮಾಡುವವರನ್ನು ವೇದಿಕೆಯಿಂದಲೇ ಎಳೆದುಕೊಂಡು ಬರುತ್ತೇವೆ. ಜಾಮೀನು ಸಿಕ್ಕರೂ ಅಪರಾಧ ಸಾಬೀತುಪಡಿಸಿ ಜೈಲಿಗಟ್ಟುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಷ್ಟು ಮಾತ್ರವಲ್ಲದೇ ಯಾವುದೋ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದಾದರೂ ಸಾಕ್ಷ್ಯ ಇದ್ದಲ್ಲಿ ಅದನ್ನು ಪೊಲೀಸರಿಗೊಪ್ಪಿಸಿ ಅದನ್ನು ಹೊರತುಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ ವಹಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ. ಇನ್ನು, ವಿಶೆಷ ಕಾರ್ಯಪಡೆ ಸಿಬ್ಬಂದಿಗಳಿಗೆ ತರಬೇತಿ ನಡೆಯುತ್ತಿದೆ. ಸಿಬ್ಬಂದಿಯನ್ನು ಮೂರು ನಾಲ್ಕು ವಿಂಗ್ ಗಳಾಗಿ ಮಾಡಿದ್ದು, ಮುಂದಿನ ಒಂದು ತಿಂಗಳು ಬೆಂಗಳೂರಿನಲ್ಲಿ ತರಬೇತಿ ನಡೆಯಲಿದೆ ಎಂದಿದ್ದಾರೆ.





