ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಸ್ಥಿತಿ: ಗಲ್ಫ್‌ಗೆ ತೆರಳುವ ವಿಮಾನ ಕಾರ್ಯಾಚರಣೆಗೆ ಅಡ್ಡಿ
ಮಂಗಳೂರು: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಖತರ್‌ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆದಿದ್ದರ ಹಿನ್ನೆಲೆ ಖತರ್, ಬಹರೈನ್ ವಾಯುಪ್ರದೇಶ ಮುಚ್ಚಲಾಗಿದ್ದು, ಈ ಕಾರಣಕ್ಕೆ ಮಂಗಳೂರಿನಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ ಎಂದು ಹೇಳಲಾಗಿದೆ.
ವಿಮಾನ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿರುವ ಹಿನ್ನೆಲೆ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮುನ್ನ ತಮ್ಮ ವಿಮಾನಗಳ ಸ್ಥಿತಿಯ ಕುರಿತು ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.ಇನ್ನು, ದಮಾಮ್ ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಮಸ್ಕತ್‌ಗೆ ತಿರುಗಿಸಲಾಗಿದ್ದು, ಅಬುಧಾಬಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಮುಂಬೈನಲ್ಲಿ ಇಳಿಸಲಾಯಿತು ಎಂದು ವರದಿಯಾಗಿದೆ.





