ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಭೀಕರ ಹತ್ಯೆ

ಕಲಬುರಗಿ: ನಗರದ ಹೊರವಲಯದ ಪಟ್ನಾ ಗ್ರಾಮದ ಸಮೀಪ ಡ್ರೈವರ್‌ ಧಾಬಾ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಕೊಲೆಯಾದ ಮೂವರನ್ನು ಸಿದ್ಧಾರೂಢ ಶರಣಬಸಯ್ಯ(35), ಜಗದೀಶ್‌ ದತ್ತಾತ್ರೇಯ(33), ರಾಮಚಂದ್ರ ಅಂಬಾರಾವ್(‌35) ಎಂದು ಗುರುತಿಸಲಾಗಿದೆ.
ಹಳೆ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ತಡರಾತ್ರಿ ೧.೩೦ ರ ಸುಮಾರಿಗೆ ಡ್ರೈವರ್‌ ಧಾಬಾಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.
ಈ ಬಗ್ಗೆ ಕಲಬುರಗಿ ಸಬ್‌ಅರ್ಬನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!