ಮಂಗಳೂರು: ಮಾದಕ ವಸ್ತುಗಳ ಸಾಗಾಟ ಇಬ್ಬರು ಆರೋಪಿಗಳ ಬಂಧನ
ಮಂಗಳೂರು(ಉಡುಪಿ ಟೈಮ್ಸ್ ವರದಿ): ನಗರದಲ್ಲಿ ಲಾಕ್ ಡೌನ್ ಇದ್ದರು ಮಾದಕ ವಸ್ತುಗಳ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೋಣಾಜೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಿಂದ ಕೇರಳಕ್ಕೆ ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಎಂಡಿಎಂಎ ಖರೀದಿಸಿ ಸ್ವಿಫ್ಟ್ ಕಾರಿನ ಮೂಲಕ ಕೋಣಾಜೆ ಠಾಣಾ ವ್ಯಾಪ್ತಿಯ ಮುಡಿಪು ನಾಟೆಕಲ್ ರಸ್ತೆ ಮೂಲಕ ಕೇರಳಕ್ಕೆ ಸಾಗಾಟ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಪೊಲೀಸರು ಬಂಧಿಸಿದ್ದಾರೆ. ಇವರಿಂದ 3.90 ಲಕ್ಷ ರೂ. ಮೌಲ್ಯದ 65 ಗ್ರಾಂ. ಎಂಡಿಎಂಎ, 5 ಲಕ್ಷ ರೂ. ಮೌಲ್ಯದ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.