ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ: ಶಿರ್ವ ಠಾಣಾ ಹೆಡ್ ಕಾನ್ಸ್ಟೇಬಲ್ ಪುತ್ರಿಗೆ ಸನ್ಮಾನ

ಶಿರ್ವ: ಶಿರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಆದ ಪ್ರಕಾಶ ಗುಡಿಗಾರ್ ಹಾಗೂ ವಸಂತಿ ದಂಪತಿಗಳ ಮಗಳಾದ ಪ್ರಕೃತಿ ಪಿ ಗುಡಿಗಾರ್ ಇವರು 2024-2025 ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 624/625 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಬಂದಿದ್ದು, ಇವರಿಗೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾದ ಶ್ರೀ ಹರಿರಾಮ್ ಶಂಕರ್ ಐ.ಪಿ.ಎಸ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಅರುಣ್ ಕೆ ಐ.ಪಿ.ಎಸ್, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸುಧಾಕರ ನಾಯ್ಕ್ ಮತ್ತು ಪರಮೇಶ್ವರ ಹೆಗಡೆ ಹಾಗೂ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರಿಯಂವದಾ ಐ.ಪಿ.ಎಸ್ ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!