ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಮಗುವಿಗೆ ಜನ್ಮ ನೀಡಿದ ಯುವತಿ

ಪುತ್ತೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭಿಣಿಯಾದ ಬಳಿಕ ಯುವಕ ವಿವಾಹವಾಗಲು ನಿರಾಕರಿಸಿರುವ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮನೀಡಿದ್ದಾಳೆ.
ಬಪ್ಪಳಿಗೆ ನಿವಾಸಿ ಕೃಷ್ಣರಾವ್‌ (21) ಮತ್ತು ಸಂತ್ರಸ್ತ ಯುವತಿ(21) ಇಬ್ಬರೂ ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. 2024ರ ಅ.11ರಂದು ಆರೋಪಿ ಕೃಷ್ಣ ಸಂತ್ರಸ್ತ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡು ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಕೆಲವು ತಿಂಗಳ ನಂತರ ಸಂತ್ರಸ್ತೆ ಗರ್ಭಿಣಿಯಾಗಿದ್ದು, ವಿಚಾರವನ್ನು ಆರೋಪಿ ಕೃಷ್ಣನಿಗೆ ತಿಳಿಸಿದ್ದಾನೆ. ಈ ವೇಳೆ ಮನೆಯವರ ಬಳಿ ಈ ವಿಚಾರ ಹೇಳದಿದ್ದರೆ ತಾನು ಮದುವೆಯಾಗುವುದಾಗಿ ಹೇಳಿದ್ದ. ಬಳಿಕ ಮದುವೆಗೆ ನಿರಾಕರಿಸಿದ್ದ ಯುವಕನ ಮೇಲೆ ಯುವತಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹ ಪ್ರಕರಣ ದಾಖಲಿಸಿದ್ದಳು, ಪ್ರಕರಣ ದಾಖಲಾಗುತ್ತಿದ್ದಂತೆ ಯುವಕ ತಲೆಮರೆಸಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!