ಪ್ರಚೋದನಾಕಾರಿ ಹೇಳಿಕೆ ಆರೋಪ: ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲು
ಉಡುಪಿ: ಇತ್ತೀಚೆಗೆ ಬ್ರಹ್ಮಾವರದ ಕುಂಜಾಲುವಿನಲ್ಲಿ ದನದ ರುಂಡ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಆರೋಪಿಸಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮತನಾಡಿದ ಅವರು, ಇದರ ಹಿಂದೆ ಯಾರಿದ್ದಾರೆಂದು ಕಂಡು ಹಿಡಿಯಬೇಕು, ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ, ಗಲಭೆ ಸೃಷ್ಟಿ ಸುವಂತಹ ಹುನ್ನಾರವನ್ನು ಈಗಾಗಲೇ ಸಂಘಪರಿವಾರದ ಮತ್ತು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಈ ಹಿನ್ನೆಲೆ ಆರೋಪಿ ರಿಯಾಜ್ ಕಡಂಬು ಆಧಾರರಹಿತವಾಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





