ಉಡುಪಿ:ಉಚ್ಚಿಲ ದಸರಾ-2025 – ಪೂರ್ವಭಾವಿ ಸಭೆ

ಉಚ್ಚಿಲ ಜು.06(ಉಡುಪಿ ಟೈಮ್ಸ್ ವರದಿ): ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ವರ್ಷ 4ನೇ ಬಾರಿಗೆ ಉಡುಪಿ – ಉಚ್ಚಿಲ ದಸರಾ-2025 ಉತ್ಸವವನ್ನು ಶಿಸ್ತು ಬದ್ಧ ಹಾಗೂ ಸಾಂಪ್ರದಾಯಿಕವಾಗಿ ಜನಾಕರ್ಷಣೆಯ ದಸರಾ ಉತ್ಸವವಾಗಿ ಆಯೋಜನೆ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು  ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್‌ರವರು ತಿಳಿಸಿದ್ದಾರೆ.

ಈ ಬಗ್ಗೆ ಇಂದು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಮೊಗವೀರ ಬವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಪ್ರತೀದಿನ ಚಂಡಿಕಾಯಾಗ, ಕಲ್ಲೋಕ್ತ ಪೂಜೆ, ಸಾಮೂಹಿಕ ಕುಂಕುಮಾರ್ಚನೆ, ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಭಿನ್ನ ರೀತಿಯ ವಸ್ತು ಪ್ರದರ್ಶನದೊಂದಿಗೆ ವೈಭವೋಪೇತ ವಿಸರ್ಜನಾ ಮೆರವಣಿಗೆ ಆಚರಿಸುವ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಡುಪಿ ಶಾಸಕ ಯಶಪಾಲ್ ಎ ಸುವರ್ಣ, ಉಡುಪಿ – ಉಚ್ಚಿಲ ದಸರಾ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೆಂಗ್ರೆ, ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್ ಮಲ್ಪೆ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು,  ಬಗ್ವಾಡಿ ಹೋಬಳಿ ಮೊಗವೀರ ಮಹಾಜನ ಸೇವಾ ಸಂಘ ಕುಂದಾಪುರ ಇದರ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ದ.ಕ. ಮೊಗವೀರ ಮಹಾಜನ ಸಂಘದ ಮಹಿಳಾ ಘಟಕಾಧ್ಯಕ್ಷೆ ಉಷಾರಾಣಿ ಬೋಳೂರು, ಅನಿಲ್ ಕುಮಾರ್ ಬೊಕ್ಕಪಟ್ಟ, ರತ್ನಾಕರ್ ಸಾಲ್ಯಾನ್, ಸುಜಿತ್ ಸಾಲ್ಯಾನ್, ಹರಿಯಪ್ಪ ಆರ್. ಕೋಟ್ಯಾನ್, ಶ್ರೀಪತಿ ಭಟ್ ಉಚ್ಚಿಲ, ಮನೋಜ್ ಕಾಂಚನ್, ಸುಗುಣ ಎಸ್. ಕರ್ಕೇರ ಹಾಗೂ ಆಡಳಿತ ಸಮಿತಿಯ ಸದಸ್ಯರು, ವಿವಿಧ ಸಂಘ ಸಂಸ್ಥೆ ಗಳ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!