ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ “ಕೊಡೆ ದಿನ”: ವಿದ್ಯಾರ್ಥಿಗಳಿಂದ ಮಾನ್ಸೂನ್ ಸ್ವಾಗತ

ಉಡುಪಿ: ಸಾಲಿಹಾತ್ ಶಿಕ್ಷಣ ಸಂಸ್ಥೆ ವತಿಯಿಂದ ಮಾನ್ಸೂನ್ (ಮಳೆಗಾಲ) ಹಿನ್ನೆಲೆಯಲ್ಲಿ ಕೊಡೆ ದಿನ ಆಚರಿಸಲಾಯಿತು. ವಿದ್ಯಾರ್ಥಿಗಳು ಬಣ್ಣ ಬಣ್ಣದ ಕೊಡೆಗಳನ್ನು ಹಿಡಿದು ಮಳೆಯನ್ನು ಸಂಭ್ರಮಿಸಿ ಸ್ವಾಗತಿಸಿದರು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು.


ಕೊಡೆ ದಿನದಲ್ಲಿ ವಿದ್ಯಾರ್ಥಿಗಳು ಆಧುನಿಕ ಕೊಡೆಯೊಂದಿಗೆ ಹಳೆಯ ಪದ್ಧತಿಯ ಮಳೆಯಿಂದ ರಕ್ಷಣೆ ಪಡೆಯುವ ಸಾಧನಗಳನ್ನು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ, ಅಕಾಡೆಮಿಕ್ ಮುಖ್ಯಸ್ಥರಾದ ಹಸೀಬ್ ತರಫ್ದಾರ್, ಶಿಕ್ಷಕಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!