ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ವರುಣನ ಅಬ್ಬರ ಮುಂದುವರಿದಿದೆ. ಈಗಾಗಲೇ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿರುವ ಮಳೆ, ಬಿಟ್ಟು ಬಿಡದೇ ಸುರಿಯುತ್ತಲೇ ಇದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 10 ರಿಂದ 16ರವರೆಗೆ ಭಾರೀ ಮಳೆಯಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





