ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಜೂನ್ ತಿಂಗಳ ಕಾರ್ಯಕ್ರಮ ವಿವರ

ಉಡುಪಿ (ಉಡುಪಿ ಟೈಮ್ಸ್ ವರದಿ) : ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ 6 ಮಂಡಲಗಳಲ್ಲಿ 12 ಕಡೆ ಯೋಗ ದಿನಾಚರಣೆ ಕಾರ್ಯಕ್ರಮಗಳನ್ನು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಕೋವಿಡ್ ನಿಯಮ ಪಾಲನೆಯೊಂದಿಗೆ ಆಯೋಜನೆ ಮಾಡಲಾಗಿದೆ

ಜೂನ್ 23 ರಂದು ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಮತ್ತು ಜುಲೈ 6 ರಂದು ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸಸಿ ನೆಡುವ ಕಾರ್ಯಕ್ರಮ ಆಯೋಜನೆ. ಪ್ರತಿ ಬೂತ್ ನಲ್ಲಿ ಕನಿಷ್ಠ 25 ಸಸಿ ನೆಡುವ ಸಂಕಲ್ಪವನ್ನು ಹೊಂದಲಾಗಿದೆ.

ಹಾಗೂ ಜೂನ್ 23 ರಿಂದ ಜುಲೈ 6 ರ ವರೆಗೆ ಶುದ್ಧ ಜಲಮೂಲಗಳಿಗಾಗಿ ಕೆರೆ, ನದಿ ಮತ್ತಿತರ ಕಡೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಹೆಕ್ಕಿ ತೆಗೆಯುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು. ಕೋವಿಡ್ ಮಹಾಮಾರಿಯ ಈ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತರ ತುರ್ತು ಅವಶ್ಯವಿದ್ದು ಇದಕ್ಕಾಗಿ ಪ್ರತಿ ಬೂತ್ ನಲ್ಲಿ ಕನಿಷ್ಠ 2 ಕಾರ್ಯಕರ್ತರಿಗೆ ಕೋವಿಡ್ ನಿರ್ವಹಣೆ ತರಬೇತಿ ನೀಡಲಾಗಿದೆ.

ಜಿಲ್ಲೆಯ ಒಟ್ಟು 1111 ಬೂತ್‌ಗಳಲ್ಲಿ 2222 ಕಾರ್ಯಕರ್ತರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದ್ದು ಆಕ್ಸಿಮೀಟರ್,ಥರ್ಮಾಮೀಟರ್, ಮಧುಮೇಹ ತಪಾಸಣೆ ಯಂತ್ರ ಮೊದಲಾದವುಗಳು ಇರುವ ಹೆಲ್ತ್ ಕಿಟ್ ಪೂರೈಕೆ ಮಾಡಲಾಗುವುದು ಹಾಗೂ 1975 ರಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ್ದ ಪ್ರಜಾಪ್ರಭುತ್ವ ಹತ್ತಿಕ್ಕಿದ ತುರ್ತು ಪರಿಸ್ಥಿತಿಯ ಕರಾಳ ನೆನಪಿಗಾಗಿ ಜೂನ್ 25 ರಂದು “ತುರ್ತು ಪರಿಸ್ಥಿತಿಯ ಒಂದು ನೆನಪು” ಎಂಬ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!