ಉಡುಪಿ: ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಕಾರ್ಯಕ್ರಮ
ಉಡುಪಿ ಜು.10(ಉಡುಪಿ ಟೈಮ್ಸ್ ವರದಿ): ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ರ ಪ್ರಯುಕ್ತ ಏಕ್ ಪೇಡ್ ಮಾ ಕೆ ನಾಮ್’ ಎಂಬ ಗಿಡ ನೆಡುವ ಸಂಕಲ್ಪ ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ಎಂಬ ಕಾರ್ಯಕ್ರಮ ಸುಬೋದಿನಿ ಹಿರಿಯ ಪ್ರಾಥಮಿಕ ಶಾಲೆ ಅಲೆವೂರಿನಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ,ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘ, ಉಡುಪಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ “ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು” ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮವನ್ನು ಅಲೆವೂರು ಗ್ರಾಮ ಪಂಚಾಯತ್ ನ ಅಧ್ಯಕ್ಷ ಯತೀಶ್ ಕುಮಾರ್ ಅಲೆವೂರು ಇವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಈ ಕಾರ್ಯಕ್ರಮದ ಆಶಯದಂತೆ ನಿಮ್ಮ ನಿಮ್ಮ ಮನೆಯ ಆವರಣದಲ್ಲಿ ಗಿಡಗಳನ್ನು ಬೆಳೆಸಿ ಪೋಸಿಸಬೇಕು. ಮಕ್ಕಳಲ್ಲಿ ಸಣ್ಣ ವಯಸ್ಸಿನಲ್ಲೇ ಪರಿಸರದ ಬಗ್ಗೆ ಕಾಳಜಿ ಮೂಡಿದರೆ ನಮ್ಮ ನಾಡು ಹಚ್ಚಹಸಿರಾಗಿ ಯಾವಾಗಲೂ ಇರುತ್ತದೆ ಎಂದರು.
ಅಧ್ಯಕ್ಷತೆಯನ್ನು ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘ ಉಡುಪಿ ಇದರ ಅಧ್ಯಕ್ಷ ಭಾಸ್ಕರ ಬಿ.ಕಾಮತ್ ಅವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಅಲೆವೂರು ಹರೀಶ್ ಕಿಣಿ, ಸುಭೋದಿನಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ, ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಉಪಾದ್ಯಕ್ಷ ಎಲ್ ಉಮಾನಾಥ್, ನಿರ್ದೇಶಕ ರಾಧಾಕೃಷ್ಣ ಶೆಣೈ, ಗೋಪಾಲ ನಾಯ್ಕ, ದೇವದಾಸ್ ಯು, ರಂಜನಾ ಎಸ್,ಶೆಟ್ಡಿ, ಸುಜಾತ ಎಸ್. ಪ್ರಭು, ದಿನೇಶ್ ಕಿಣಿ, ದಾಮೋದರ್ ಎಂ ಶೆಟ್ಟಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್, ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶೋಕ್ ಭಟ್ ಉಪಸ್ಥಿತರಿದ್ದರು,





