AI ಬಳಸಿ ಸುಳ್ಳು ಮಾಹಿತಿ ಆರೋಪ: ಯೂಟ್ಯೂಬರ್‌ ಸಮೀರ್‌ ಎಂ.ಡಿ ವಿರುದ್ಧ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ನೀಡಿರುವ ಮಾಹಿತಿಯನ್ನು ಹೊರತುಪಡಿಸಿ AI ಬಳಸಿ ಸುಳ್ಳು ಮಾಹಿತಿಯನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್‌ ನಲ್ಲಿ ಪ್ರಸಾರ ಮಾಡಿರುವ ಆರೋಪದ ಮೇಲೆ ಯುಟ್ಯೂಬರ್‌ ಸಮೀರ್‌ ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ನೂರಾರು ಮೃತದೇಹಗಳನ್ನು ಬಲವಂತವಾಗಿ ಹೂತು ಹಾಕಿದ್ದೇನೆಂದು ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಯೂಟ್ಯೂಬರ್‌ ಸಮೀರ್‌ ಎಂ.ಡಿ ತನ್ನ ಯೂಟ್ಯೂಬ್‌ ಚಾನೆಲ್‌ ನಲ್ಲಿ ಒಟ್ಟು ಪ್ರಕರಣದ ಬಗ್ಗೆ AI ಬಳಸಿ ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡಿದ್ದಾರೆ. ಸಾರ್ವಜನಿಕರನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುವ ಉದ್ದೇಶದಿಂದ ಈ ವಿಡಿಯೋ ಪ್ರಸಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!