ಉಡುಪಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ: ದಲಿತ ಕವಿ ಡಾ. ಸಿದ್ದಲಿಂಗಯ್ಯನವರಿಗೆ “ಕವಿನಮನ”
ಉಡುಪಿ(ಉಡುಪಿ ಟೈಮ್ಸ್ ವರದಿ) : 12 ಶತಮಾನದಲ್ಲಿ ನಡೆದ ಬಸವಣ್ಣನವರ ಸಾಮಾಜಿಕ ಚಳುವಳಿಯ ಮುಂದುವರಿದ ಪರಿವರ್ತನೆಯ ಭಾಗವಾಗಿ ಆಧುನಿಕ ಕನ್ನಡ ಸಾಹಿತ್ಯದ ದಲಿತ-ಬಂಡಾಯ ಸಾಹಿತ್ಯ ಚಳುವಳಿ ಡಾ.ಸಿದ್ದಲಿಂಗಯ್ಯರ ಮೂಲಕ ನೆಲೆ ಕಂಡಿದೆ ಎಂದು ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ. ತಿಳಿಸಿದರು.
ಇವರು ಭಾರತೀಯ ಜನತಾ ಪಾರ್ಟಿ ಉಡುಪಿ ಇದರ ಜಿಲ್ಲಾ ಹಾಗೂ ನಗರ ಎಸ್ ಸಿ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಗೋಪಾಲ ಕಳೆಂಜಿ ನಾಡೋಜ ಡಾ. ಸಿಧ್ಧಲಿಂಗಯ್ಯನವರಿಗೆ “ಕವಿ ನಮನ” ಕಾರ್ಯಕ್ರಮದಲ್ಲಿ ದಲಿತ ಕವಿ ಡಾ. ಸಿಧ್ಧಲಿಂಗಯ್ಯ ನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ ನಾಡೋಜ ಡಾ. ಸಿಧ್ಧಲಿಂಗಯ್ಯ ಇವರ ಜೀವನ ಚರಿತ್ರೆ ಕುರಿತು ಮಾತನಾಡಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ಜಿ.ಪಂ. ನಿಕಟಪೂರ್ವ ಅಧ್ಯಕ್ಷ, ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವೀಣಾ ಶೆಟ್ಟಿ, ಜಿಲ್ಲಾ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸದಾನಂದ ಆರ್ ಕೈಪುಂಜಾಲು, ನಗರ ಎಸ್ ಸಿ ಮೋರ್ಚಾ ದ ಅಧ್ಯಕ್ಷರಾದ ಕಿರಣ್ ಕುತ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.