ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿಗೆ ಆರೆಂಜ್‌ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರಿನ ಅಬ್ಬರ ಜೋರಾಗಿದ್ದು, ಕಳೆದೊಂದು ವಾರದಿಂದ ಎಡೆಬಿಡದೇ ಸುರಿಯುತ್ತಿದೆ. ಈಗಾಗಲೇ ಹಲವಾರು ಅವಾಂತರವನ್ನು ಸೃಷ್ಟಿಸಿರುವ ಮಳೆ ಇಂದೂ ಕೂಡ ಮುಂದುವರಿಯಲಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಂಡ್ಯ, ಮೈಸೂರು, ಚಾಮರಾಜ ನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್‌, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ತುಮಕೂರು, ರಾಮ ನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೊಪ್ಪಳದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 24ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಮಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲೀ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!