ಉಡುಪಿ: ನಾಳೆ(ಜೂ 23) ಜಿಲ್ಲೆಯಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಯ ವಿವರ

ಉಡುಪಿ( ಉಡುಪಿ ಟೈಮ್ಸ್ ವರದಿ) : ಕೊರೋನಾ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಜಿಲ್ಲೆಯಲ್ಲಿ ನಾಳೆ ಅಂದರೆ  ಜೂ.23 ರಂದು ಲಭ್ಯವಿರುವ ಕೋವಿಡ್ ಲಸಿಕೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ಮಾಹಿತಿ ನೀಡಿದ್ದಾರೆ. 
ಈ ಬಗ್ಗೆ ಮಾಹಿತಿ ನೀಡಿರುವ ಅವರು, ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾ ಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ/ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಜೂ. 23 ರಂದು ಬೆಳಿಗ್ಗೆ 9.30 ರಿಂದ 4.30 ರ ವರೆಗೆ ತಮಗೆ ಸೂಚಿಸಿದ ಲಸಿಕಾ ಕೇಂದ್ರ ಕ್ಕೆ ಬಂದು ಲಸಿಕೆ ಪಡೆಯಬಹುದು. 
ಜಿಲ್ಲೆಯಲ್ಲಿ ನಾಳೆ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ. 
ಉಳಿದಂತೆ  ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ) ಯಲ್ಲಿ  200 ಡೋಸ್  ಕೋವಿಶೀಲ್ಡ್  ಲಸಿಕೆ 
ಕಮಲಬಾಯಿ ಪ್ರೌಢಶಾಲೆ, ಕಡಿಯಾಳಿ 300 ಡೋಸ್ ಕೋವಿಶೀಲ್ಡ್ ಲಸಿಕೆ,
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) 280 ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ 70 ಡೋಸ್ ಕೋವ್ಯಾಕ್ಸಿನ್ ಲಸಿಕೆ
ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ 150 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು, ಜೂ.25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ನಾಳೆ ಅಂದರೆ ಜೂ.23 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.ಹಾಗೂ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!