ಉಡುಪಿ: ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಎಸ್ ಐ ಓ ವತಿಯಿಂದ ಸರಕಾರಕ್ಕೆ ಮನವಿ
ಉಡುಪಿ ಜೂ.23( ಉಡುಪಿ ಟೈಮ್ಸ್ ವರದಿ): ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಉಡುಪಿ ಜಿಲ್ಲಾ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್ ಐ ಓ) ಆಗ್ರಹಿಸಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಸ್ ಐಓ ನ ಅವರು ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರ ಕ್ಕೆ
ಕೆಲವೊಂದು ಬೇಡಿಕೆಗಳನ್ನು ಸರಕಾರದ ಮುಂದೆ ಇಟ್ಟಿದ್ದಾರೆ.
ಅದರಂತೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮಸ್ಯೆಗಳನ್ನು ಅರಿಯುವ ಸಲುವಾಗಿ ಕೈಗೊಂಡ ಸರ್ವೆಯಲ್ಲಿ ಸರಕಾರಿ ಶಿಕ್ಷಕರಿಗಿಂತ ಖಾಸಗಿ ಶಾಲಾ ಶಿಕ್ಷಕರು ವೇತನ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿದ್ದು, ಖಾಸಗಿ ಶಾಲಾ ಶಿಕ್ಷಕರಿಗೂ ಸರಕಾರ ವೇತನ ನೀಡಿ, ಸೂಕ್ತ ಪರಿಹಾರ ನೀಡಬೇಕು.ಖಾಸಗಿ ಶಾಲಾ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡುವುದನ್ನು ನಿಲ್ಲಿಸುವಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.
ಹಳ್ಳಿ ಪ್ರದೇಶದ ವಿದ್ಯಾರ್ಥಿಗಳು ನೆಟ್ವರ್ಕ್ ಹಾಗೂ ಸ್ಮಾರ್ಟ್ ಫೋನ್ ನ ಅಲಭ್ಯ ತೆಯಿಂದ ಆನ್ಲೈನ್ ಕ್ಲಾಸ್ ನಿಂದ ವಂಚಿತರಾಗುತ್ತಿದ್ದು, ಅಗತ್ಯ ಇರುವ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಆನ್ಲೈನ್ ಕ್ಲಾಸ್ ಗೆ ಸ್ಮಾರ್ಟ್ ಫೋನ್ ನೀಡಬೇಕು ಹಾಗೂ ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳ ಬೇಕು.
ಇದರೊಂದಿಗೆ ವಲಸೆ ಕಾರ್ಮಿಕರು ಹೊಟ್ಟೆ ಪಾಡಿಗಾಗಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ತೆರಳುತ್ತಾರೆ ಇದರಿಂದ ಇವರ ಮಕ್ಕಳು ಆನ್ಲೈನ್ ಕ್ಲಾಸ್ ಸೇರಿದಂತೆ ಶಿಕ್ಷಣ ದಿಂದ ವಂಚಿತರಾಗುತ್ತಿದ್ದು ಸರಕಾರ ಮದ್ಯ ಪ್ರವೇಶಿಸಿ ಅವರ ಸಮಸ್ಯೆಗಳನ್ನು ಅರಿತು ಅವರಿಗೆ ಶಿಕ್ಷಣ ಕ್ಕೆ ಪೂರಕವಾದ ವ್ಯವಸ್ಥೆ ಕಲ್ಪಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ದ ಅಲಭ್ಯತೆಯ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.