ರಾಜ್ಯದ ಪೊಲೀಸರಿಗೆ ಗುಡ್ ನ್ಯೂಸ್: ಡಿಜಿ- ಐಜಿಪಿ ಡಾ. ಎಂ.ಎ.ಸಲೀಂ ಅವರಿಂದ ಹೊಸ ಆದೇಶ ಪ್ರಕಟ

ಬೆಂಗಳೂರು: ರಾಜ್ಯದ ಪೊಲೀಸರಿಗೆ ಇನ್ನೂ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಿಗೆ ಸಾಂದರ್ಭಿಕ ರಜೆ ಸಿಗಲಿದೆ.

ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಡಾ. ಎಂ.ಎ.ಸಲೀಂ ಸುತ್ತೋಲೆ ಹೊರಡಿಸಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡುವಂತೆ ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ, ಒತ್ತಡ ಕಡಿಮೆಯಾಗುತ್ತದೆ ಮತ್ತು ಇದು ಕೆಲಸದ ಮೇಲಿನ ದಕ್ಷತೆಯನ್ನು ಹೆಚ್ಚಿಸುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!