ಬೆಂಗಳೂರು: ಡೆಲ್ಟಾ ಪ್ಲಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆ
ಬೆಂಗಳೂರು, ಜೂ. 23 (ಉಡುಪಿ ಟೈಮ್ಸ್ ವರದಿ): ಕರ್ನಾಟಕದಲ್ಲಿ ಕೊರೋನ ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರದ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿದೆ ಎಂಬ ಆತಂಕಕಾರಿ ವಿಚಾರವೊಂದು ತಿಳಿದು ಬಂದಿದೆ
ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಮಾಹಿತಿ ನೀಡಿದ್ದು, ಮೈಸೂರಿನಲ್ಲಿ ಒಬ್ಬ ರೋಗಿಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಪತ್ತೆಯಾಗಿದೆ. ಅವರನ್ನು ನಾವು ಪ್ರತ್ಯೇಕಿಸಿದ್ದೇವೆ. ಸೋಂಕಿತ ವ್ಯಕ್ತಿಯಲ್ಲಿ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಹಾಗೂ ಅವರ ಸಂಪರ್ಕಿತರಲ್ಲಿ ಯಾರೂ ವೈರಸ್‌ಗೆ ತುತ್ತಾಗಿಲ್ಲ ಎಂದು ಸ್ಪಷ್ಟಪಡಿಸಿದರು.