ಉಡುಪಿ: ಇಂದು(ಜೂ 23) 135 ಮಂದಿಯಲ್ಲಿ ಕೋವಿಡ್ ಸೋಂಕು ದೃಢ : 3 ಸಾವು

ಉಡುಪಿ ಜೂ.23(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕಟ್ಟು ನಿಟ್ಟಾಗಿ ಕೋವಿಡ್ ನಿಯಮ ಜಾರಿ ಮಾಡಿರುವ ಪರಿಣಾಮ ದಿಂದಾಗಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ.

ಜಿಲ್ಲೆಯಲ್ಲಿ ಇಂದು 135 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 57, ಕುಂದಾಪುರದಲ್ಲಿ 31, ಕಾರ್ಕಳ ದಲ್ಲಿ 41 ಹಾಗೂ ಹೊರ ಜಿಲ್ಲೆಯ 6 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ‌ ಸಂಖ್ಯೆ 1423 ಕ್ಕೆ ಇಳಿಕೆ ಯಾಗಿದೆ. ಇಂದು ಜಿಲ್ಲೆಯಲ್ಲಿ ಕುಂದಾಪುರದಲ್ಲಿ ಇಬ್ಬರು ಮಹಿಳೆಯರು ಹಾಗೂ ಕಾರ್ಕಳದಲ್ಲಿ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜೂ. 22 ರಂದು ಜಿಲ್ಲೆಯಲ್ಲಿ 229ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 40,464 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 65686 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 63,885 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2 ನೇ ಅಲೆಯಲ್ಲಿ ಜೂ.22 ರ ವೇಳೆಗೆ ಜಿಲ್ಲೆಯಲ್ಲಿ 2,96,383ಮಂದಿ ಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 42,075 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2 ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 188ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 3 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 6 ಹಾಗೂ ಹೊರ ಜಿಲ್ಲೆಯ 17 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 22 ಮಂದಿ ಸೋಂಕಿನಿಂದ ಗುಣ ಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 27 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!