ಉಡುಪಿ: ಜೂ.24 ರಂದು ಲಭ್ಯವಿರುವ ಲಸಿಕೆಯ ಮಾಹಿತಿ

ಉಡುಪಿ ಜೂ. 23 ( ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ನಾಳೆ ಅಂದರೆ ಜೂ. 24 ರಂದು ಲಭ್ಯವಿರುವ ಕೋವಿಡ್ ಲಸಿಕೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಅವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯಲ್ಲಿ ನಾಳೆ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ. ಉಳಿದಂತೆ ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಆಯ್ದ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತದೆ.

ಅದರಂತೆ, ಅಜ್ಜರಕಾಡು ಜಿಲ್ಲಾ ಆಸ್ಪತ್ರೆ (ಸೇಂಟ್ ಸಿಸಿಲಿ ಶಾಲೆ)ಯಲ್ಲಿ 150 ಡೋಸ್ ಕೋವಿಶೀಲ್ಡ್ ಲಸಿಕೆ, ಕಕ್ಕುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 300 ಡೋಸ್ ಕೋವಿಶೀಲ್ಡ್ ಲಸಿಕೆ, ಹಾಗೂ ಹನುಮಂತನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ) -150 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು , ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳಿಗೆ, ಆದ್ಯತಾ ಗುಂಪಿನವರಿಗೆ, ಆರೋಗ್ಯ ಕಾರ್ಯಕರ್ತರುಗಳಿಗೆ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಕೋವಿಡ್-19 ಲಸಿಕೆ ನೀಡಲಾಗುತ್ತದೆ.

ಜೂ. 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ 200 ಡೋಸ್ ಕೋವಿಶೀಲ್ಡ್ ಲಸಿಕೆಯು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ (ಬಿಆರ್ ಎಸ್)ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತ ಪಡಿಸಿಕೊಂಡು ಜೂ. 24 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು. ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!