ಕೇಂದ್ರ ಸಚಿವರಿಗೂ ಸಿಡಿ ಭೀತಿ..? ಮಾನ ಹಾನಿ ವರದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ

ಬೆಂಗಳೂರು: “ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪು ಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ‌ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು’ ಎಂದು ಟ್ವಿಟ್ ಮಾಡಿರುವ ಡಿ ವಿ ಸದಾನಂದ ಗೌಡ ಅವರು ತಮ್ಮ ಮಾನಕ್ಕೆ ಹಾನಿ ತರುವ ಯಾವುದೇ ಸುದ್ದಿಯನ್ನು ಪ್ರಕಟಿಸಬಾರದು ಎಂದು ಮಾಧ್ಯಮಗಳ ವಿರುದ್ಧ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದು ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಮಧ್ಯೆ, ಟ್ವೀಟ್ ಮಾಡಿರುವ ಡಿವಿಎಸ್, ‘ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ.ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪು ಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ‌ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು’ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!