ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಸಿ.ಶಿಖಾ ಮರುನೇಮಕ

ಬೆಂಗಳೂರು,ಜುಲೈ 3:ಎರಡು ದಿನಗಳ ಹಿಂದೆಯಷ್ಟೇ ಬೆಂ ಸಿ. ಶಿಖಾಗಳೂರಿನ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ವರ್ಗಾವಣೆ ಗೊಂಡಿದ್ದ ಐಎಎಸ್ ಅಧಿಕಾರಿ ಸಿ. ಶಿಖಾ ಅವರನ್ನು ಮತ್ತೆ ಬಿಎಂಟಿಸಿ ಎಂ.ಡಿ ಯಾಗಿ ಮರುನೇಮಕ ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಆದೇಶ ಹೊರಡಿಸಿದ್ದು, ಕರ್ನಾಟಕ ಕೆಡರ್ 2004 ರ ಬ್ಯಾಚ್ ಐಎಎಸ್ ಅಧಿಕಾರಿ ಶಿಖಾ ಸಿ ಅವರನ್ನು ಕಮರ್ಷಿಯಲ್ ಟ್ಯಾಕ್ ಕಮೀಷನರ್ ಹುದ್ದೆಯಿಂದ ಕೂಡಲೇ ಜಾರಿಗೆ ಬರುವಂತೆ ಬಿಎಂಟಿಸಿಯ ಎಂಡಿಯಾಗಿ ನೇಮಕ ಮಾಡಿದ್ದಾರೆ.

ಇದೇ ವೇಳೆ ಮತ್ತೊಬ್ಬ ಐಎಎಸ್ ಅಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ಕೊಪ್ಪಳ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕೊಪ್ಪಳ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.

ಈ ಹಿಂದೆ ಐಎಎಸ್ ಅಧಿಕಾರಿ ಸಿ. ಶಿಖಾ ಅವರನ್ನು ಬಿಎಂಟಿಸಿ ಎಂಡಿ ಹುದ್ದೆಯಿಂದ ವರ್ಗಾವಣೆ ಮಾಡಿ,
ವಾಣಿಜ್ಯ ತೆರಿಗೆ ಆಯುಕ್ತೆ ಯಾಗಿ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರಕಾರ ಶಿಖಾ ಅವರನ್ನು ಮತ್ತೆ ಬಿಎಂಟಿಸಿ ಎಂಡಿ ಹುದ್ದೆಗೆ ಮರುನೇಮಕ ಮಾಡಿ ಆದೇಶ ಹೊರಡಿಸಿದೆ

Leave a Reply

Your email address will not be published. Required fields are marked *

error: Content is protected !!