ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ಸರ್ಕಾರ ಬದ್ಧ: ಮೋದಿ

ನವದೆಹಲಿ ಜು.3 : ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ‘ನಮ್ಮ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಕೋಟ್ಯಂತರ ವ್ಯಾಪಾರಿಗಳಿಗೆ ಹಣಕಾಸು ಸೌಲಭ್ಯ ಪಡೆಯುವುದು ಸುಲಭವಾಗಲಿದೆ. ಅನೇಕ ಪ್ರಯೋಜನಗಳನ್ನು ಪಡೆಯುವ ಮೂಲಕ ವ್ಯವಹಾರ ಹೆಚ್ಚಿಸಲು ನೆರವಾಗಲಿದೆ. ವ್ಯಾಪಾರಸ್ಥರ ಸಬಲೀಕರಣಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಬರೆದು ಕೊಂಡಿದ್ದಾರೆ.

ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಎಂಎಸ್‌ಎಂಇ ಉದ್ಯಮದ ವ್ಯಾಪ್ತಿಗೆ ತರಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಘೋಷಿಸಿದ್ದರು. ಇದರಿಂದಾಗಿ ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯದವರಿಗೆ ಕೂಡ ಆರ್‌ಬಿಐ ಮಾರ್ಗಸೂಚಿ ಅನ್ವಯ ಆದ್ಯತೆಯ ಮೇರೆಗೆ ಸಾಲ ಲಭ್ಯವಾಗಲಿದೆ.

Leave a Reply

Your email address will not be published. Required fields are marked *

error: Content is protected !!