ವಿಧಾನಸಭೆಯಲ್ಲಿ ಅನುಚಿತ ವರ್ತನೆ 12 ಮಂದಿ ಬಿಜೆಪಿ ಶಾಸಕರ ಅಮಾನತು

ಮುಂಬಯಿ ಜು.5 : ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿ ಅನುಚಿತ ವರ್ತನೆ ತೋರಿದ 12 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ಒಂದು ವರ್ಷದವರೆಗೆ ಅಮಾನತುಗೊಳಿಸಿರುವ ಘಟನೆ ಇಂದು ನಡೆದಿದೆ.

 ರಾಜ್ಯ ವಿಧಾನಸಭೆಯಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿತ್ತು. ಈ ವೇಳೆ ಸ್ಪೀಕರ್ ಭಾಸ್ಕರ್ ಜಾಧವ್ ಅವರನ್ನು ನಿಂದಿಸಿದ ಆರೋಪದ ಮೇಲೆ 12 ಮಂದಿ ಬಿಜೆಪಿ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಬಿಜೆಪಿ ಶಾಸಕರನ್ನು ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಅವರು ಮಂಡಿಸಿದ್ದು, ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿತ್ತು ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!