ಉಡುಪಿ: ಜಿಲ್ಲೆಯಲ್ಲಿ ಇಂದು(ಆ.13) 115 ಮಂದಿಯಲ್ಲಿ ಕೋವಿಡ್ ಸೋಂಕು ದೃಢ
ಉಡುಪಿ ಆ.13 (ಉಡುಪಿ ಟೈಮ್ಸ್ ವರದಿ) : ಜಿಲ್ಲೆಯಲ್ಲಿ ಕೋವಿಡ್ 2 ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶಗಳು ಹೀಗಿವೆ.
ಜಿಲ್ಲೆಯಲ್ಲಿ ಇಂದು 115 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 58, ಕುಂದಾಪುರ ದಲ್ಲಿ 16, ಕಾರ್ಕಳ ದಲ್ಲಿ 39 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1274 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಕುಂದಾಪುರದ 45 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈ ವರೆಗೆ 2 ನೇ ಅಲೆಯಲ್ಲಿ ಒಟ್ಟು 242 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಆ.12 ರಂದು ಜಿಲ್ಲೆಯಲ್ಲಿ 99 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 46, 345 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 71,472 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 69,766 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೋವಿಡ್ 2 ನೇ ಅಲೆಯಲ್ಲಿ ಆ. 12 ರ ವೇಳೆಗೆ ಜಿಲ್ಲೆಯಲ್ಲಿ 4,74,319 ಮಂದಿ ಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 47,861 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.
ಇನ್ನು ಜಿಲ್ಲೆಯಲ್ಲಿ 7 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕಾರ್ಕಳದಲ್ಲಿ 6 ಹಾಗೂ ಹೊರ ಜಿಲ್ಲೆಯ 40 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 39ಮಂದಿ ಸೋಂಕಿನಿಂದ ಗುಣ ಮುಖರಾಗಿದ್ದು,
5 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 51 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.