ಉಡುಪಿ: 169 ಜನರಲ್ಲಿ ಕೋವಿಡ್ ಸೋಂಕು ದೃಢ-1296ಕ್ಕೆ ಸಕ್ರಿಯ ಪ್ರಕರಣ ಏರಿಕೆ
ಉಡುಪಿ ಆ.14 (ಉಡುಪಿ ಟೈಮ್ಸ್ ವರದಿ) : ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶಗಳು ಹೀಗಿವೆ.
ಜಿಲ್ಲೆಯಲ್ಲಿ ಇಂದು 169 ಮಂದಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 98, ಕುಂದಾಪುರ 25, ಕಾರ್ಕಳ 43 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1296 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಉಡುಪಿಯ 61 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈ ವರೆಗೆ 2 ನೇ ಅಲೆಯಲ್ಲಿ ಒಟ್ಟು 243 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಆ.13 ರಂದು ಜಿಲ್ಲೆಯಲ್ಲಿ 146 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 46, 491 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 71,641 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 69,912 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೋವಿಡ್ 2ನೇ ಅಲೆಯಲ್ಲಿ ಆ. 13 ರ ವೇಳೆಗೆ ಜಿಲ್ಲೆಯಲ್ಲಿ 4,80,167 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 48,030 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.
ಇನ್ನು ಜಿಲ್ಲೆಯಲ್ಲಿ 7 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕಾರ್ಕಳ 6 ಹಾಗೂ ಹೊರ ಜಿಲ್ಲೆಯ 40 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 39 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 5 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 51 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.