ಉಡುಪಿ: ಇಂದು (ಸ.14) 75 ಮಂದಿಯಲ್ಲಿ ಕೋವಿಡ್ ಸೋಂಕು ದೃಢ
ಉಡುಪಿ ಸೆ.13 (ಉಡುಪಿ ಟೈಮ್ಸ್ ವರದಿ) : ಜಿಲ್ಲೆಯಲ್ಲಿ ಕೋವಿಡ್ 2 ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶಗಳು ಹೀಗಿವೆ.
ಜಿಲ್ಲೆಯಲ್ಲಿ ಇಂದು 75 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 42, ಕುಂದಾಪುರದಲ್ಲಿ 10, ಕಾರ್ಕಳ ದಲ್ಲಿ 21 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,514 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಯಾರೂ ಕೂಡ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈ ವರೆಗೆ 2 ನೇ ಅಲೆಯಲ್ಲಿ ಒಟ್ಟು 269 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೆ.12 ರಂದು ಜಿಲ್ಲೆಯಲ್ಲಿ 62 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 49,808 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 75,202 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 73,229 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೋವಿಡ್ 2 ನೇ ಅಲೆಯಲ್ಲಿ ಸೆ.12 ರ ವೇಳೆಗೆ ಜಿಲ್ಲೆಯಲ್ಲಿ 6,84,990 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 51,591 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.