ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ : ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ

ಬೆಂಗಳೂರು ಸೆ.14( ಉಡುಪಿ ಟೈಮ್ಸ್ ವರದಿ) : ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಹೇಳಿದ್ದಾರೆ.

ಹಿಂದಿ ದಿವಸ್ ಆಚರಣೆ ಕುರಿತು ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿರುವ ಅವರು ” ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ”. “ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ”.

“ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ?” ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!