ಕೊಲ್ಲೂರು :ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಕೊಲ್ಲೂರು ಸೆ.21 (ಉಡುಪಿ ಟೈಮ್ಸ್ ವರದಿ) : ವಿದ್ಯಾರ್ಥಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನ ಕೊಲ್ಲೂರು ಗ್ರಾಮದ ಬಾವಡಿ ಎಂಬಲ್ಲಿ ನಡೆದಿದೆ. ಸುಪ್ರೀತ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇವರು ಕುಂದಾಪುರದ ಖಾಸಗಿ ಶಾಲೆಯೊಂದರಲ್ಲಿ ಬಿಕಾಂ ವ್ಯಾಸಂಗಮಾಡುತ್ತಿದ್ದರು.
ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದು ಕಾಲೇಜಿನ ಪರೀಕ್ಷೆಯ ಬಗ್ಗೆ ಭಯಬೀತರಾಗಿದ್ದರು. ಅದೇ ಕಾರಣದಿಂದ ಅಥವಾ ವೈಯಕ್ತಿಕ ಕಾರಣಗಳಿಂದ ಮನನೊಂದು ಸೆ.20 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತ ವಿದ್ಯಾರ್ಥಿಯ ತಂದೆ ಚಂದ್ರ ನಾಯ್ಕ ಅವರು ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.