ಉಡುಪಿ: ಜಿಲ್ಲೆಯಲ್ಲಿ ಇಂದು 73 ಮಂದಿಯಲ್ಲಿ ಕೋವಿಡ್ ಸೋಂಕು ದೃಢ, ಓರ್ವ ಮಹಿಳೆ ಸಾವು

ಸೆ.21 (ಉಡುಪಿ ಟೈಮ್ಸ್ ವರದಿ) : ಜಿಲ್ಲೆಯಲ್ಲಿ ಕೋವಿಡ್ 2 ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶಗಳು ಹೀಗಿವೆ.

ಜಿಲ್ಲೆಯಲ್ಲಿ ಇಂದು 73 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 40 , ಕುಂದಾಪುರದಲ್ಲಿ 11 , ಕಾರ್ಕಳದಲ್ಲಿ 22 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 751 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಉಡುಪಿಯ 51 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 2 ನೇ ಅಲೆಯಲ್ಲಿ ಒಟ್ಟು 279 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಸೆ.20 ರಂದು ಜಿಲ್ಲೆಯಲ್ಲಿ 274 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 51,219 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 75,860 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 74,640 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2 ನೇ ಅಲೆಯಲ್ಲಿ ಸೆ.20 ರ ವೇಳೆಗೆ ಜಿಲ್ಲೆಯಲ್ಲಿ 7,31,977 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 52,249 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.

Leave a Reply

Your email address will not be published. Required fields are marked *

error: Content is protected !!