ಮಹಿಳೆಯರಿಗೆ ಈ ವರ್ಷವೇ ‘ಎನ್’ಡಿಎ’ ಪರೀಕ್ಷೆ ಬರೆಯಲು ಅವಕಾಶ ನೀಡಿ: ಸುಪ್ರೀಂ ಕೋರ್ಟ್

ನವದೆಹಲಿ ಸೆ.22 : ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‍ಡಿಎ) ಪ್ರವೇಶ ಪರೀಕ್ಷೆಗೆ ಸಂಬಂಧಿಸಿ ನೇಮಕಾತಿ ಮುಂದೂಡಲು ಸಾಧ್ಯವಿಲ್ಲ, ಮಹಿಳೆಯರಿಗೆ ಈ ವರ್ಷವೇ ‘ಎನ್’ಡಿಎ’ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಎಸ್‍ಡಿಎ ಪ್ರವೇಶ ಪರೀಕ್ಷೆ ಬರೆಯುವ ವಿಚಾರಕ್ಕೆ ಸಂಬಂಧಿಸಿ, ಮುಂದಿನ ವರ್ಷದಿಂದ ಮಹಿಳಾ ಅಭ್ಯರ್ಥಿಗಳು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‍ಡಿಎ) ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ಹಾಗೂ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ನ್ಯಾಯಪೀಠ, ಮೇ 2022 ರಲ್ಲಿ ಪರೀಕ್ಷೆಗೆ ಹಾಜರಾದರೆ ಜೂನ್ 2023 ರಲ್ಲಿ ಪ್ರವೇಶಾತಿ ನಡೆಯುತ್ತದೆ. ನಾವು ಒಂದು ವರ್ಷದವರೆಗೆ ವಿಳಂಬ ಮಾಡಲು ಸಾಧ್ಯವಿಲ್ಲ. ನಾವು ಹುಡುಗಿಯರಿಗೆ ಭರವಸೆ ನೀಡಿದ್ದೇವೆ. ನಾವು ಈಗ ಆ ಭರವಸೆಯನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೆ, ಈ ವರ್ಷವೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‍ಡಿಎ) ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಆದೇಶಿಸಿದೆ.

ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಶಸ್ತ್ರ ಪಡೆಗಳು ಅತ್ಯುತ್ತಮ ಪ್ರತಿಕ್ರಿಯಾ ತಂಡವಾಗಿದ್ದು, ಎನ್‍ಡಿಎಯಲ್ಲಿ ವಿಳಂಬವಿಲ್ಲದೆ ಮಹಿಳೆಯರ ಸೇರ್ಪಡೆಗೆ ಹಾದಿ ಸುಗಮಗೊಳಿಸಲು ಅಗತ್ಯವಾದ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಆಶಿಸುತ್ತೇವೆ. ಇದಕ್ಕಾಗಿ ಯುಪಿಎಸ್‍ಸಿ ಸಹಯೋಗದೊಂದಿಗೆ ರಕ್ಷಣಾ ಇಲಾಖೆಯಿಂದ ಅಗತ್ಯವಾದ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದೆ.

ಈ ಪರೀಕ್ಷೆ ಸಂಬಂಧ ಕುಶ್ ಕಲ್ರಾ ಎಂಬುವವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಚಿನ್ಮಯ್ ಪ್ರದೀಪ್ ಶರ್ಮಾ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!