ಮಂಗಳೂರಿನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಮಂಗಳೂರು(ಉಡುಪಿ ಟೈಮ್ಸ್ ವರದಿ): ರೌಡಿ ಶೀಟರ್‌ವೊಬ್ಬನನ್ನು ಬರ್ಬರವಾಗಿ ಹತ್ಯೆಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ಬಳಿ ನಡೆದಿದೆ. ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾದವರು ಎಂದು ತಿಳಿದುಬಂದಿದ್ದು, ಈತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ತಡರಾತ್ರಿಯಿಂದ ಗುರುವಾರ ನಸುಕಿನ ಜಾವದೊಳಗೆ ಈ ಹತ್ಯೆ ನಡೆದಿದೆ ಎನ್ನಲಾಗಿದ್ದು, ಇಂದ್ರಜಿತ್‌ನನ್ನು ಮಾರಕ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿ ಗಾರ್ಡನ್ ಬಳಿ ಎಸೆಯಲಾಗಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಗಾರ್ಡನ್ ಬಳಿ ಇಂದ್ರಜೀತ್ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.