ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡುವಂತಿಲ್ಲ: ಅಶ್ವಥ್ ನಾರಾಯಣ್

ಬೆಂಗಳೂರು ಸೆ.29 (ಉಡುಪಿ ಟೈಮ್ಸ್ ವರದಿ) : ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕದ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಅವರು ಮಹತ್ವದ ಘೋಷಣೆ ಹೊರಡಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕೊರೋನಾ ಹಿನ್ನಲೆಯಲ್ಲಿ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ವರ್ಷ ಶುಲ್ಕ ಹೆಚ್ಚಳ ಮಾಡುವಂತಿಲ್ಲ. ಕಾಲೇಜುಗಳಲ್ಲಿ 20 ಸಾವಿರಕ್ಕಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ. ವಿವಿ ಶುಲ್ಕದ ಹೆಸರನ್ನು ಅನೇಕರು ದುರುಪಯೋಗಪಡಿಸಿಕೊಂಡಿದ್ದಾರೆ. ಹೆಚ್ಚುವರಿ ಶುಲ್ಕವನ್ನು ಪಡೆಯದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ ನಿಗಾ ವಹಿಸಬೇಕು. ಹಾಗೂ ಪರೀಕ್ಷಾ ಪ್ರಾಧಿಕಾರದಿಂದಲೇ ಶುಲ್ಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗಲಿದೆ. ಸ್ಕಿಲ್ ಟ್ರೇನಿಂಗ್ ಫೀಸ್ ತೆಗೆದುಕೊಳ್ಳುವುದು ಕಡ್ಡಾಯವಲ್ಲ. ವಿಟಿಯುಗೆ ಭೇಟಿ ನೀಡಿ ಒಪ್ಪಿಗೆ ಕೊಟ್ಟ ಬಳಿಕ ಶುಲ್ಕ ಪಡೆಯಬೇಕು. ವಿಟಿಯು ಒಪ್ಪಿಗೆ ಇಲ್ಲದೆಯೇ ಸ್ಕಿಲ್ ಫೀಸ್ ಸಂಗ್ರಹ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭವಾಗಲಿದೆ ಎಂದಿರುವ ಅವರು, ಮೈಸೂರಿನ ಮಹಾರಾಜ ಕಾಲೇಜು, ಎಸ್.ಜೆಆರ್ ಚಿಕ್ಕಬಳ್ಳಾಪುರ, ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು ಹಾಗೂ ವಿಜಯಪುರದ ಬಿಎಲ್ ಡಿಇ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದಲ್ಲಿ ಕನ್ನಡದಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಬಹುದಾಗಿದೆ . ಇದಕ್ಕಾಗಿ ಕನ್ನಡದಲ್ಲೇ ಪಠ್ಯ ವಸ್ತು ಸಿದ್ಧವಾಗಿದೆ ಎಂದು ಅವರು ಮಾಹಿತಿ ನೀಡಿದರು

Leave a Reply

Your email address will not be published. Required fields are marked *

error: Content is protected !!