ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಮತ್ತೇ ಏರಿಕೆ

ಮುಂಬೈ, ಅ.21: ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇಂದೂ ಕೂಡಾ ಇಂಧನ ಬೆಲೆಯಲ್ಲಿ ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 110.25 ರೂ. ತಲುಪಿದರೆ, ಡೀಸೆಲ್ ದರ 101.12 ರೂ. ಆಗಿದೆ.

ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 106.54 ರೂ. ಆಗಿದ್ದರೆ, ಡೀಸೆಲ್ ದರ 95.27 ರೂ. ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 112.44 ರೂ. ಹಾಗೂ ಡೀಸೆಲ್ ದರ 103.26 ರೂ. ಗೆ ಹೆಚ್ಚಳವಾಗಿದೆ.

ಇದರೊಂದಿಗೆ ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ 107.12 ರೂ. ಹೆಚ್ಚಳವಾಗಿದ್ದರೆ, ಡೀಸೆಲ್ ದರ 98 ರೂ. ಗೆ ಹೆಚ್ಚಳವಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ದರ 103.26 ಹಾಗೂ ಡೀಸೆಲ್ ದರ 99.68 ರೂ.ಆಗಿದೆ.

ಇನ್ನು ತೈಲ ಬೆಲೆಯಲ್ಲಿ ಆಗಿರುವ ಹೆಚ್ಚಳ ಕುರಿತು ಮಾಹಿತಿ ನೀಡಿರುವ ಕೇಂದ್ರ ಪೆಟ್ರೋಲಿಯಂ ಸಚಿವ ಹರ್‍ದೀಪ್ ಸಿಂಗ್ ಪುರಿ ಅವರು, “ಭಾರತವು ಕಚ್ಚಾ ತೈಲ ಆಮದು ಮಾಡಿಕೊಳ್ಳಲು 2020ರ ಜೂನ್ 8.8 ಬಿಲಿಯನ್ ಡಾಲರ್ ವೆಚ್ಚ ಮಾಡುತ್ತಿತ್ತು. ಆದರೆ, ಈಗ ಆ ಮೊತ್ತ 24 ಬಿಲಿಯನ್ ಅಮೆರಿಕನ್ ಡಾಲರ್‍ಗೆ ಹೆಚ್ಚಳವಾಗಿದೆ. ತೈಲ ಬೆಲೆಯಲ್ಲಿ ಆಗಿರುವ ಹೆಚ್ಚಳ ಇದಕ್ಕೆ ಕಾರಣ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!