ಅಪ್ಪುವಿನ ಅಂತಿಮ ಸಂಸ್ಕಾರ ನಾಳೆಗೆ ನಿಗದಿ: ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು(ಉಡುಪಿ ಟೈಮ್ಸ್ ವರದಿ): ಪುನೀತ್ ಅವರ ಅಂತಿಮ ಸಂಸ್ಕಾರವನ್ನು ನಾಳೆ (ಅ 31 . ಭಾನುವಾರ) ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪುನೀತ್ ಪುತ್ರಿ ಬೆಂಗಳೂರಿಗೆ ಬರುವುದು ಸಂಜೆ 6 ಆಗಲಿದೆ. ಸಂಜೆಯ ನಂತರ ಅಂತ್ಯಕ್ರಿಯೆ ನಡೆಸುವುದು ಕಷ್ಟವಾಗಬಹುದು. ಅಲ್ಲದೇ, ಅವರ ಅಭಿಮಾನಿಗಳು ಇನ್ನೂ ಬಹಳಷ್ಟು ಸಂಖ್ಯೆಯಲ್ಲಿ ಬರುವವರಿದ್ದಾರೆ. ಹೀಗಾಗಿ ರಾಜಕುಮಾರ್ ಕುಟುಂಬಸ್ಥರ ಜೊತೆ ಚರ್ಚೆ ಮಾಡಿ ನಾಳೆಗೆ ಅಂತ್ಯಕ್ರಿಯೆ ನಿಗದಿ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.