ವ್ಯಾಟಿಕನ್ :ಪ್ರಧಾನಿ ನರೆಂದ್ರ ಮೋದಿ ರವರಿಂದ ಪೋಪ್ ಫ್ರಾನ್ಸಿಸ್ ಭೇಟಿ
ವ್ಯಾಟಿಕನ್ ಸಿಟಿ ಅ.30 : ಜಿ.20 ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೆಂದ್ರ ಮೋದಿ ಅವರು ರೋಮ್ಗೆ ಭೇಟಿ ನೀಡಿದ್ದಾರೆ. ಈ ವೇಳೆ
ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿರುವ ಪ್ರಧಾನಿ ಭಾರತಕ್ಕೆ ಭೇಟಿ ನೀಡುವಂತೆ ಅವರಿಗೆ ಆಹ್ವಾನ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪೋಪ್ ಫ್ರಾನ್ಸಿಸ್ ಅವರೊಂದಿಗೆ ಅತ್ಯಂತ ಆತ್ಮೀಯ ಭೇಟಿಯನ್ನು ನಡೆಸಿದೆ, ಅವರೊಂದಿಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಅವಕಾಶ ಸಿಕ್ಕಿತು. ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದೆ’. ಎಂದು ಟ್ವೀಟ್ ಮಾಡಿದ್ದಾರೆ.
ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜಿ.20 ಶೃಂಗಸಭೆಯಲ್ಲಿ ಭಾಗವಹಿಸಲು ರೋಮ್ಗೆ ತೆರಳಿದ್ದರು. ಈ ವೇಳೆ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭ ಪ್ರಧಾನಿ ಅವರ ಜೊತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ್ ಇದ್ದರು.