ಬೆಂಗಳೂರು:ನ.8 ರಿಂದ ಅಂಗನವಾಡಿ ಗಳನ್ನು ಪುನರಾರಂಭಿಸಲು ಸರಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು ನ.2 : ರಾಜ್ಯಾದ್ಯಂತ ನ.8 ರಿಂದ ಅಂಗನವಾಡಿ ಗಳನ್ನು ಪುನರ್ ಪ್ರಾರಂಭಿಸಲು ಸರಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂಬ ಸುದ್ದಿಯೊಂದು ವರದಿಯಾಗಿದೆ.

ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿ ಮಾಹಿತಿ ನೀಡಿದ್ದಾರೆ. ಅದರಂತೆ ಕೋವಿಡ್ ಮುಂಜಾಗೃತೆಗಳನ್ನು, ನಿಯಮಗಳನ್ನು ಪಾಲಿಸಿಕೊಂಡು ಅಂಗನವಾಡಿಗಳನ್ನು ತೆರೆಯಲು ಆದೇಶ ನೀಡಲಾಗಿದೆ.
ಅಂಗನವಾಡಿಗಳನ್ನು ತೆರೆಯಲು ಸರಕಾರ ಹೊರಡಿಸಿರುವ ನಿಯಮನುಸಾರ ರಾಜ್ಯ ಸರ್ಕಾರವು ಪತ್ರದಲ್ಲಿ ಶೇ.2ಕ್ಕಿಂತ ಕಡಿಮೆ ಟಿಪಿಆರ್ ಇರುವ ತಾಲ್ಲೂಕುಗಳಲ್ಲಿ ಕೋವಿಡ್-19 ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಯಮದೊಂದಿಗೆ ಹಾಗೂ ಲಸಿಕೆ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮೂಲಕ ಸೇವೆಗಳನ್ನು ಒದಗಿಸಲು 2 ಗಂಟೆಗಳ ಕಾಲ ಅಂಗನವಾಡಿ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ಅಂಗನವಾಡಿ ಕೇಂದ್ರಗಳನ್ನು ಪುನರ್ ಪ್ರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳು ಹೀಗಿವೆ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು. ಕೇಂದ್ರದ ಒಳ ಆವರಣ ಮತ್ತು ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಬೇಕು
ಅಂಗವಾಡಿ ಕೇಂದ್ರಗಳಲ್ಲಿನ ಪಾಕೋಪಕರಣ, ಮಕ್ಕಳು ಕುಳಿತು ಕೊಳ್ಳಲು ಉಪಯೋಗಿಸಿದ ಜಮಖಾನ, ಡೆಸ್ಕ್, ಕುರ್ಚಿ, ಆಟಿಕೆ ಸಮಾನುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನ ಶುಚಿಗೊಳಿಸಬೇಕು. ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಚಗೊಳಿಸುವುದು.
ಪೌಷ್ಟಿಕ ಆಹಾರ ತಯಾರಿಸುವ ಎಲ್ಲಾ ಪಾತ್ರೆ, ಲೋಟ, ಕುಕ್ಕರ್ ಶುಚಿಗೊಳಿಸಬೇಕು
ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಗ್ರಾಮ ಪಂಚಾಯಿತಿ ಮತ್ತು ಬಾಲವಿಕಾಸ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡಬೇಕು.
ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಲು ಇಚ್ಚಿಸುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಅಂಗನವಾಡಿ ಕಾರ್ಯಕರ್ತೆಯರು ಪಡೆಯಬೇಕು.
ಅಂಗವಾಡಿ ಕೇಂದ್ರಗಳ ಫಲಾನುಭವಿಗಳ ಎಲ್ಲಾ ಪೋಷಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.
ಕೋವಿ ಪಾಸಿಟಿವಿಟಿ ದರ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯಬೇಕು

Leave a Reply

Your email address will not be published. Required fields are marked *

error: Content is protected !!