ಅಜೆಕಾರು: ಎದೆ ನೋವಿನಿಂದ ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು
ಅಜೆಕಾರು ನ.2 (ಉಡುಪಿ ಟೈಮ್ಸ್ ವರದಿ) : ಎದೆ ನೋವಿನಿಂದ ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿಯ ವರಂಗ ಗ್ರಾಮದಲ್ಲಿ ನಡೆದಿದೆ.
ಗಣೇಶ್ ಶೆಟ್ಟಿ (48) ಮೃತಪಟ್ಟವರು. ಇವರು ನಿನ್ನೆ ಬೆಳಿಗ್ಗೆ ಎಂದಿನಂತೆ ಕಾಡು ಹೊಳೆಯ ಬಾರ್ ಆಂಡ್ ರೆಸ್ಟೋರೆಂಟ್ ಗೆ ಕೆಲಸಕ್ಕೆಂದು ಹೋಗಿದ್ದರು. ಈ ವೇಳೆ ಗಣೇಶ್ ಅವರು ತಮ್ಮ ಅಣ್ಣನ ಬಳಿ ಮಾತನಾಡುತ್ತಿರುವಾಗ ಎದೆನೋವಿನಿಂದ ಕುಸಿದು ಬಿದ್ದಿದ್ದರು.
ಕೂಡಲೇ ಅವರನ್ನು ಮುನಿಯಾಲಿನ ಖಾಸಗಿ ವೈಧ್ಯರಲ್ಲಿ ತೋರಿಸಿದ್ದು ಬಳಿಕ ವೈದ್ಯರ ಸಲಹೆ ಮೇರೆಗೆ ಅವರನ್ನು ಕಾರ್ಕಳದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.